ಬೆಳಗಾವಿ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಭಾಗಿ- ಪ್ರಿಯಾಂಕ ಗಾಂಧಿ ಜೊತೆ ಮಾತುಕತೆ

0

ಪುತ್ತೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೂರನೇ ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಳಗಾವಿಯ ಮಿಲಿಟ್ರಿ ಗ್ರೌಂಡಿನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಸಮಾವೇಶ ಗಾಂಧಿಭಾರತದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು.


ಲಕ್ಷಾಂತರ ಮಂದಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಇದಾಗಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹಿತ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರುಗಳು ಭಾಗವಹಿಸಿದ್ದರು.

ಪ್ರಿಯಾಂಕ ಗಾಂಧಿ ಜೊತೆ ಮಾತುಕತೆ
ಇದೇ ಸಂದರ್ಭದಲ್ಲಿ ಶಾಸಕರಾದ ಅಶೋಕ್ ರೈ ಅವರು ಕಾಂಗ್ರೆಸ್ ವರಿಷ್ಠೆ, ವಯನಾಡ್ ಸಂಸದೆ ಪ್ರಿಯಾಂಕ ಗಾಂಧಿ ಜೊತೆ ಮಾತುಕತೆ ನಡೆಸಿದರು. ಸುಮಾರು 10 ನಿಮಿಷಗಳ ಕಾಲ ಪ್ರಿಯಾಂಕ ಜೊತೆ ಶಾಶಕರು ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಮಾವೇಶದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಪದ್ಮರಾಜ್ ಆರ್ ಪೂಜಾರಿ, ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಯಂಗ್‌ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಪಿ ಕೆ, ಇಕ್ಬಾಲ್ ಡಿಸಿಸಿ ಸದಸ್ಯ ಇಕ್ಬಾಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಪುತ್ತೂರಿನಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ತೆರಳಿದ್ದರು.

LEAVE A REPLY

Please enter your comment!
Please enter your name here