ಪುತ್ತೂರು: ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ ಹಾಗೂ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಸಕ್ರಿಯ ಸದಸ್ಯ ನವೀನ್ ಕೊರುಂಗು ಅವರ ಸಹೋದರ ವಿನಯ್ ಕೊರುಂಗು ನಿಧನದ ಹಿನ್ನೆಲೆಯಲ್ಲಿ ಅವರ ಮನೆಗೆ ಭಜನಾ ಮಂಡಳಿಯಿಂದ ಸಂಗ್ರಹಿಸಿದ ಮೊತ್ತವನ್ನು ಅರುಣ್ ಕುಮಾರ್ ಪುತ್ತಿಲ ಅವರ ಮೂಲಕ ಹಸ್ತಾಂತರಿಸಲಾಯಿತು.
ವಿನಯ ಕೊರುಂಗು ಅವರು ನಿಧನದ ಹಿನ್ನೆಲೆಯಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರುಗಳು ವಿನಯ್ ಕುಟುಂಬಕ್ಕೆ ನೆರವಾಗಲು ಆರ್ಥಿಕ ನಿಧಿ ಸಂಗ್ರಹಿಸಿದ್ದರು. ಸಂಗ್ರಹಿಸಿದ ಮೊತ್ತವನ್ನು ವಿನಯ್ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.