ಉಪ್ಪಿನಂಗಡಿ: 39ನೇ ವರ್ಷದ ಹೊನಲು ಬೆಳಕಿನ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಮಾ.22ರಂದು ನಡೆಯಲಿದ್ದು, ಇದರ ಕರೆ ಮುಹೂರ್ತವು ಜ.24ರಂದು ಕೂಟೇಲು ದಡ್ಡುವಿನ ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿರುವ ಜೋಡುಕರೆಯಲ್ಲಿ ನಡೆಯಿತು.
ಈ ಸಂದರ್ಭ ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ರಾಮಚಂದ್ರ ಮಣಿಯಾಣಿ, ವಾರಿಸೇನ ಜೈನ್, ಮೋನಪ್ಪ ಪಮ್ಮನಮಜಲು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಅಮ್ಟೂರು ಬಾರಿಕೆ, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಸಾಮಾನಿ ಸಂಪಿಗೆದಡಿ, ಕೃಷ್ಣಪ್ರಸಾದ್ ಬೊಳ್ಳಾವು, ವಿಜಯ ಪೂಜಾರಿ ಚೀಮುಳ್ಳು, ಸಹ ಸಂಚಾಲಕರಾದ ಶಿವರಾಮ ಶೆಟ್ಟಿ ಗೋಳ್ತಮಜಲು, ರಾಜೇಶ್ ಶೆಟ್ಟಿ ಉಪ್ಪಿನಂಗಡಿ, ಕುಮಾರನಾಥ ಪಲ್ಲತ್ತಾರು, ಸದಸ್ಯರಾದ ರಾಕೇಶ್ ಶೆಟ್ಟಿ ಕೆಮ್ಮಾರ, ಜಗದೀಶ್ ಕುಮಾರ್ ಪರಕಜೆ, ರಾಘವೇಂದ್ರ ನಾಯಕ್ ನಟ್ಟಿಬೈಲು, ಕೃಷ್ಣಪ್ಪ ಪೂಜಾರಿ ನಂದಿನಿನಗರ, ಕೃಷ್ಣಕುಮಾರ್ ರೈ ಪುಣ್ಚಪ್ಪಾಡಿ, ದೇವರಾಜ್ ಶೆಟ್ಟಿ ಸಂಪ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.