





ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಿದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುನೀತಾ ಗಣೇಶ್ ಅವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಎಸ್.ಡಿ.ಎಂ.ಸಿ ಸದಸ್ಯ ಸುಧಾಕರ್ ಕಾಣಿಯೂರು, ಶಿಕ್ಷಕರಾದ ಶೋಭಿತಾ, ಗೀತಾ ಕುಮಾರಿ, ಸುರೇಖಾ, ಶೃತಿ, ದಿವ್ಯಾ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಶಶಿಕಲಾರವರು ಸ್ವಾಗತಿಸಿ, ಶಿಕ್ಷಕ ಜನಾರ್ದನ ಹೇಮಳ ವಂದಿಸಿದರು. ಈ ಸಂದರ್ಭದಲ್ಲಿ ಚಿತ್ರದುರ್ಗಾ ಚಿಂತನ ಪ್ರಕಾಶನ ಹಾಗೂ ನವೋದಯ ಪ್ರಕಾಶನ ಇವರು ನಡೆಸಿದ ವಿವಿಧ ಸ್ಪರ್ಧೆಗಳ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪದಕ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.















