ಕಡಬ : ಉತ್ತಮ ಸಮಾಜ ನಿರ್ಮಾಣದ ಕಾಯಕದಲ್ಲಿ ನಾವೆಲ್ಲರೂ ತೊಡಗಿಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣ ಪಡೆದು ಬೇರೆ ಬೇರೆ ಹುದ್ದೆಗಳನ್ನು ಅಲಂಕರಿಸುವ ನಡುವೆ ದೇಶ ರಕ್ಷಣೆ ಮಾಡುವತ್ತಲೂ ಯೋಚಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಕಡಬದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದ ಸಮಗ್ರತೆಯೇ ನಮ್ಮ ಆದ್ಯತೆ ತೆಯಾಗಬೇಕು. ಸೇವಾ ಮನೋಭಾವ ನಮ್ಮಲ್ಲಿರಬೇಕು ಎಂದರಲ್ಲದೆ ಸಮಾಜ ಕಟ್ಟುವಲ್ಲಿ ಮುಂಚೂಣಿಯಲ್ಲಿರುವ ಸಮಾಜದ ವಿವಿಧ ಕ್ಷೇತ್ರದಲ್ಲಿರುವವರನ್ನು ಗಣರಾಜ್ಯೋತ್ಸವ ಸಂದರ್ಭ ಗುರುತಿಸುವ ಕಾರ್ಯ ಆಗಬೇಕೆಂದರು.
ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಧ್ವಜಾರೋಹಣ ಮತ್ತು ಧ್ವಜವಂದನೆ ಸ್ವೀಕಾರ ಮಾಡಿದರು.ಎಸ್.ಐ ಅಭಿನಂದನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು.