ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ- ಚಾಲನೆ

0

ಕಾವು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಂಗಳೂರು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಹಾಲು ಉತ್ಪಾದಕರ ಸಹಕಾರಿ ಸಂಘ ಮಾಡ್ನೂರು ಪಾಪೆಮಜಲು, ಒಳಮೊಗ್ರು, ನಿಡ್ಪಳ್ಳಿ, ಬಡಗನ್ನೂರು, ಈಶ್ವರಮಂಗಲ, ಸುಳ್ಯಪದವು, ಕೊಳ್ತಿಗೆ, ಕೈಕಾರ, ಪರ್ಪುಂಜ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾವು, ಲಯನ್ಸ್ ಕ್ಲಬ್ ಪುತ್ತೂರು, ಕಾವು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಬ್ಯಾಂಕ್ ಆಫ್ ಬರೋಡಾ ಸಂಯೋಜಿತ, ಮಂಗಳೂರು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾವು ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆಗೆ ಜ.28 ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಚಾಲನೆ ನೀಡಲಾಯಿತು.

ಬೆಳಿಗ್ಗೆ ನಡೆದ ಆಕರ್ಷಕ ಮೆರವಣಿಗೆ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ ಮತ್ತು ಉಪಾಧ್ಯಕ್ಷ ಎಸ್.ಬಿ ಜಯರಾಮ ರೈ ಚಾಲನೆ ನೀಡಿದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ನಡೆಯಿತು. ಸಮಾರಂಭದಲ್ಲಿ ಭಾಗಿಯಾದ ಶಾಸಕ ಅಶೋಕ್ ಕುಮಾರ್ ರೈ ಹೆಣ್ಣು ಕರುಗಳ ಪ್ರದರ್ಶನವನ್ನು ವೀಕ್ಷಿಸಿ ಸಂತಸಪಟ್ಟರು. ಹಲವಾರು ಮಂದಿ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಚಿತ್ರ: ಕ್ರಿಶ್ಮ

LEAVE A REPLY

Please enter your comment!
Please enter your name here