





ಕಾಣಿಯೂರು: ಕುದ್ಮಾರು ಸ.ಉ.ಹಿ. ಪ್ರಾ ಶಾಲೆಯಲ್ಲಿ ಹುತಾತ್ಮರ ದಿನಾಚರಣೆಯು ಜ.30ರಂದು ನಡೆಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆರಂಭಗೊಂಡ ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಾಡಲಾಯಿತು. ಶಿಕ್ಷಕಿ ಪ್ರಿಯಾಂಕ ರವರು ದಿನದ ಮಹತ್ವದ ಕುರಿತಾಗಿ ಮಾಹಿತಿ ನೀಡಿದರು.


ಹುತಾತ್ಮರ ದಿನಾಚರಣೆಯನ್ನು ಆಚರಿಸುವುದರ ಹಿನ್ನೆಲೆ, ಗಾಂಧೀಜಿಯವರ ಜೀವನ ಚರಿತ್ರೆ, ಹುತಾತ್ಮರನ್ನು ಸ್ಮರಿಸುವ ಕಾರ್ಯಕ್ರಮವನ್ನು ಮಾಡಲಾಯಿತು. ಮೌನ ಪ್ರಾರ್ಥನೆಯನ್ನು ಮಾಡುವುದರ ಮೂಲಕ ಹುತಾತ್ಮರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.















