ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಇದರ ವತಿಯಿಂದ ನಡೆದ ರಾಜ್ಯಮಟ್ಟದ ಜ್ಞಾನದರ್ಶಿನಿ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಲಿಖಿತಾ ಕೆ(ವಿಶ್ವನಾಥ ಗೌಡ ಮತ್ತು ಪ್ರತಿಮಾ ದಂಪತಿಗಳ ಪುತ್ರಿ) ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇವಳಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ನೀಡಿರುತ್ತಾರೆ.