ಕಾಣಿಯೂರು: ಸಂಭ್ರಮ ಶನಿವಾರದ ಕಾರ್ಯಕ್ರಮದಡಿ ಕುದ್ಮಾರು ಸ.ಉ.ಹಿ.ಪ್ರಾ ಶಾಲೆಯಲ್ಲಿ ರಸ್ತೆ ಸುರಕ್ಷತಾ ಕುರಿತು ಮಾಹಿತಿ ಕಾರ್ಯಕ್ರಮವು ನಡೆಯಿತು.
ಬೆಳ್ಳಾರೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಹಾಗೂ ಕುದ್ಮಾರು ಗ್ರಾಮದ ಬೀಟ್ ಪೊಲೀಸ್ ಆಗಿರುವ ಅಶೋಕ್ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ಸಂಚಾರ ನಿಯಮಗಳು ,ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಆಗುವ ತೊಂದರೆಗಳು, ವಾಹನಗಳಲ್ಲಿ ಸಂಚರಿಸುವಾಗ ಗಮನಿಸಬೇಕಾದ ಅಂಶಗಳು, ಹಾಗೂ ಇದರಿಂದ ಆಗುವ ಅನುಕೂಲಗಳ ಬಗೆಗೆ ಸಂಪೂರ್ಣ ಮಾಹಿತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಒದಗಿಸಿದರು. ಅಲ್ಲದೆ ಪ್ರಾತ್ಯಕ್ಷಿಕೆಯ ಮೂಲಕ ಇದರ ಸಂಪೂರ್ಣ ಅರಿವನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಕುಶಾಲಪ್ಪ ಹಾಗೂ ,ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಸದಸ್ಯರು, ಪೋಷಕ ವೃಂದ, ಸುರಕ್ಷತಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.