ಅರಿಯಡ್ಕ: ಅರಿಯಡ್ಕ ಗ್ರಾಮದ ಪೈಲಕಲ್ಲು ನಾರಾಯಣ ನಾಯ್ಕ ಮತ್ತು ಗಿರಿಜಾ ದಂಪತಿಗಳ ಪುತ್ರಿ ಚೈತ್ರಾ (26ವ.) ಅಲ್ಪಕಾಲದ ಅಸೌಖ್ಯದಿಂದ ಫೆ.1 ರಂದು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು.
ಚೈತ್ರಾ ಬಾಲ್ಯದಲ್ಲಿ ಆರೋಗ್ಯವಾಗಿದ್ದರು. ಪ್ರಾಥಮಿಕ ಶಿಕ್ಷಣವನ್ನು ಪಡೆಯುವ ಸಂದರ್ಭ ಆರೋಗ್ಯದಲ್ಲಿ ಏರುಪೇರಾಗಿ ಆರೋಗ್ಯ ಸಮಸ್ಯೆಗೆ ತುತ್ತಾದರು. ಚಿಕ್ಕಂದಿನಲ್ಲೇ ಶಿಕ್ಷಣದಲ್ಲಿ ಮುಂಚೂಣಿಯಲ್ಲಿ ಇದ್ದು, ಏನಾದರೂ ಸಾಧನೆ ಮಾಡಬೇಕೆಂಬ ಆಸೆಯಲ್ಲಿದ್ದರು.
ಈಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಪೆಮಜಲು ಇಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಪ್ರೌಢಶಾಲಾ ಶಿಕ್ಷಣವನ್ನು ಸರ್ಕಾರಿ ಪ್ರೌಢಶಾಲೆ ಪಾಪೆಮಜಲು, ಪದವಿ ಪೂರ್ವ ಶಿಕ್ಷಣವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು, ಪದವಿ ಶಿಕ್ಷಣವನ್ನು ವಿವೇಕಾನಂದ ಪದವಿ ಕಾಲೇಜಿನಲ್ಲಿ ಪಡೆದಿರುತ್ತಾರೆ. ಮೃತರು ತಂದೆ, ತಾಯಿ, ಸಹೋದರಿಯರಾದ ಚಿತ್ರಾ, ಶ್ರುತಿ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.