ನಾಳೆಯಿಂದ (ಫೆ.7-13) ದರ್ಬೆತ್ತಡ್ಕ ಶಾಲೆಯಲ್ಲಿ ಬೆಟ್ಟಂಪಾಡಿ ಎನ್ಎಸ್ಎಸ್ ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರ

0

ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವು ಫೆ.7ರಿಂದ 13ರವರೆಗೆ ದ.ಕ.ಜಿ.ಪಂ.ಸ.ಉ.ಹಿ.ಪ್ರಾ ಶಾಲೆ ದರ್ಬೆತ್ತಡ್ಕ ಇಲ್ಲಿ ನಡೆಯಲಿದೆ.

“Youth for My Bharat, Youth for Digital Literacy” ಎಂಬ ಧ್ಯೇಯ ವಾಕ್ಯದೊಂದಿಗೆ ಆಯೋಜಿನೆಗೊಳ್ಳಲಿರುವ ಈ ಶಿಬಿರವನ್ನು ಶಾಸಕ ಅಶೋಕ್ ಕುಮಾರ್ ರೈ, ಚಾಲನೆಯನ್ನು ನೀಡಲಿದ್ದಾರೆ. ನಂತರ ಶಿಬಿರಾರ್ಥಿಗಳ ದೈನಂದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ಶೈಕ್ಷಣಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ,ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕೊನೆಯದಾಗಿ ಅವಲೋಕನ ಕಾರ್ಯಕ್ರಮಗಳು ನಡೆಯಲಿದೆ.


ಶೈಕ್ಷಣಿಕ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಮತ್ತು ವ್ಯಕ್ತಿತ್ವ ವಿಕಸನದ ಉದ್ದೇಶದಿಂದ ಪ್ರತಿದಿನ ಅಪರಾಹ್ನ 2.30ಕ್ಕೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ.ಪ್ರಾಥಮಿಕ ಆರೋಗ್ಯ ಕೇಂದ್ರ ತಿಂಗಳಾಡಿ ಶಿಬಿರದೊಂದಿಗೆ ಸಂಯೋಗಗೊಂಡು ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಿದ್ದಾರೆ. ಸ್ವಯಂಸೇವಕರಿಗೆ ಹಾಗೂ ಊರಿನವರಿಗೆ ಕ್ರೀಡಾ ಚಟುವಟಿಕೆಗಳು ನಡೆಯಲಿದೆ.


ಸಾರ್ವಜನಿಕ ಸಭಾ ಕಾರ್ಯಕ್ರಮಗಳು ಪ್ರತಿದಿನ ಸಾಯಂಕಾಲ 6.30ಕ್ಕೆ ಸಂಪನ್ಮೂಲ ವ್ಯಕ್ತಿಗಳೊಂದಿಗೆ ನಡೆಯಲಿದೆ. ಪ್ರತಿದಿನ ಸಾಯಂಕಾಲ 7.45ಕ್ಕೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ್ ಚಂದ್ರಗಿರಿ ಇವರ ನಿರ್ದೇಶನದೊಂದಿಗೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರ ಮಾರ್ಗದರ್ಶನದೊಂದಿಗೆ ನಡೆಯಲಿದೆ.


ಡಾ. ಯೋಗೀಶ್ ಎಲ್ ಏನ್ ಹಾಗೂ ಡಾ. ಲಾಯ್ಡ್ ವಿಕ್ಕಿ ಡಿಸೋಜ ಯೋಜನಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಸ್ವಯಂಸೇವಕರಾದ ಮನಿಶ್, ಸುಚಿತ, ರಂಜಿತ್, ಮಮತಾ ಇವರುಗಳು ಶಿಬಿರದ ನಾಯಕತ್ವವನ್ನು ವಹಿಸಲಿದ್ದಾರೆ.ಈ ಎಲ್ಲಾ ಕಾರ್ಯಕ್ರಮಗಳು ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ್ ಚಂದ್ರಗಿರಿ ಇವರ ನಿರ್ದೇಶನದೊಂದಿಗೆ ನಡೆಯಲಿದೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here