ನರೇಗಾ ಯೋಜನೆ ಅತ್ಯುತ್ತಮ ಅನುಷ್ಠಾನ: ಕಡಬ ತಾಲೂಕು ಪಂಚಾಯತ್ ಗೆ ಪ್ರಶಸ್ತಿ ಪ್ರಧಾನ

0

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2023- 24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ‌ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ನೀಡುವ ನರೇಗಾ ರಾಜ್ಯ ಪ್ರಶಸ್ತಿಯು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಪಂಚಾಯತ್ ಗೆ ಲಭಿಸಿದ್ದು ಇದರ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಫೆ. 5 ರಂದು ನಡೆಯಿತು.


ಕಡಬ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಸಹಾಯಕ‌ ನಿರ್ದೇಶಕರಾದ ಚೆನ್ನಪ್ಪ ಗೌಡ, ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಅವರು ಸ್ವೀಕರಿಸಿದರು.


ಪ್ರಶಸ್ತಿಯನ್ನು ಕರ್ನಾಟಕ ವಿಧಾನ ಪರಿಷತ್ ನ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಅರ್ಷದ್, ಶಾಸಕರು ಶರತ್ ಬಚ್ಚೇಗೌಡ, ಸರಕಾರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮನ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಇಲಾಖಾ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ ನೀಡಿದರು.

LEAVE A REPLY

Please enter your comment!
Please enter your name here