ಪುತ್ತೂರು : ಕರ್ನಾಟಕ ಮಾಧ್ಯಮ ಅಕಾಡೆಮಿ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಪುತ್ತೂರು ಮೂಲದ ಪತ್ರಕರ್ತರಾದ ಕುರಿಯ ಎಂ.ವಾಸುದೇವ ಹೊಳ್ಳ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಪ್ರಶಸ್ತಿಯನ್ನು ನೀಡಿ ,ಅಭಿನಂದಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವನಂದ ತಗಡೂರು ಮುಂತಾದವರು ಉಪಸ್ಥಿತರಿದ್ದರು.