ತಿರ್ಲೆ ಬ್ರಹ್ಮಕಲಶೋತ್ಸವ-2ನೇ ದಿನದ ಧಾರ್ಮಿಕ ಸಭೆ

0

ದೇವಸ್ಥಾನಗಳಲ್ಲಿ ಧಾರ್ಮಿಕ ಶಿಕ್ಷಣ ಸಿಗಬೇಕು: ಸೂರ್ಯನಾರಾಯಣ ಕಶೆಕೋಡಿ

ನೆಲ್ಯಾಡಿ: ಜೀರ್ಣೋದ್ದಾರಗೊಂಡಿರುವ ಕಡಬ ತಾಲೂಕಿನ ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.5ರಂದು ಆರಂಭಗೊಂಡಿರುವ ನವೀಕರಣ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ 2ನೇ ದಿನವಾದ ಫೆ.6ರಂದೂ ಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


ಸಂಜೆ ಗೌರಮ್ಮ ಶಬರಾಯ ಸಭಾಭವನದ ಎಲಿಕ್ಕಳ ಕೃಷ್ಣ ಶಬರಾಯ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದ ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಸೂರ್ಯನಾರಾಯಣ ಕಶೆಕೋಡಿ ಅವರು, ವೇದದ ಆಧಾರದಲ್ಲಿ ಹಿಂದೂ ಧರ್ಮದ ಪರಂಪರೆ ಇದೆ. ಮೂಲ ಗ್ರಂಥಗಳನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆತಿಥ್ಯ ನಿತ್ಯ ನಿರಂತರ ನಡೆಯಬೇಕು. ತೆರೆದ ಮನೆ,ಮನಸ್ಸು ನಮ್ಮದಾಗಬೇಕೆಂದು ಹೇಳಿದರು. ಸಂಸ್ಕಾರ ಕೊಡುವ ಕೆಲಸ ದೇವಸ್ಥಾನದಿಂದ ಆಗಬೇಕು. ಅನ್ನದಾನ ನಿರಂತರವಾಗಿ ನಡೆಯಬೇಕು. ಇದಕ್ಕೆ ಭಕ್ತರು ತಮ್ಮ ದುಡಿಮೆಯ ಒಂದಂಶವನ್ನು ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ದೇವಸ್ಥಾನಗಳಲ್ಲಿ ಧಾರ್ಮಿಕ ಶಿಕ್ಷಣ ನೀಡಬೇಕು ಎಂದು ಹೇಳಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ದ.ಕ. ಇಲ್ಲಿನ ಜಿಲ್ಲಾ ನಿರ್ದೇಶಕರಾದ ಪ್ರವೀಣ್‌ಕುಮಾರ್ ಮಾತನಾಡಿ, ಧಾರ್ಮಿಕ ನೆಲಗಟ್ಟು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ಬಗ್ಗೆ ಯುವಕರಿಗೆ, ಮಕ್ಕಳಿಗೆ ತಿಳುವಳಿಕೆಯ ಜ್ಞಾನ ನೀಡಬೇಕು ಎಂದು ಹೇಳಿದರು. ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಸತೀಶ್ ಕೆಡೆಂಜಿ ಸಂದರ್ಭೋಚಿತವಾಗಿ ಮಾತನಾಡಿದರು. ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ್ ರಾಮಕುಂಜ, ಜಿ.ಪಂ.ಸದಸ್ಯ ಬಾಲಕೃಷ್ಣ ಬಾಣಜಾಲು, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ಮಂಗಳೂರಿನ ನ್ಯಾಯವಾದಿ ಯಶೋಧರ ಕರ್ಕೇರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಗೋಳಿತ್ತೊಟ್ಟು ವಲಯಾಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ಮೇಲ್ವಿಚಾರಕಿ ಜಯಶ್ರೀ, ಉಪ್ಪಿನಂಗಡಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಹರೀಶ್ ಆಚಾರ್ಯ ಪುಳಿತ್ತಡಿ, ಹಿಂದೂ ಸಂಘಟನೆಯ ಮುಖಂಡ ರವಿಪ್ರಸಾದ್ ಶೆಟ್ಟಿ, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ ಆಲಂತಾಯ, ಸದಸ್ಯೆ ಜೀವಿತ ಪೆರಣ, ಅನುವಂಶಿಕ ಆಡಳಿತ ಮೊಕ್ತೇಸರರಾದ ಮಾಧವ ಸರಳಾಯ, ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಶಿವಾನಂದ ಕಾರಂತ್ ಕಾಂಚನ, ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಸಹ ಕೋಶಾಧಿಕಾರಿ ಭೀಮ್ ಭಟ್ ನೆಕ್ಕರೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಪ್ರವೀಣ್ ಭಂಡಾರಿ ಪುರ, ಕಾರ್ಯಾಲಯ ಸಮಿತಿ ಸಂಚಾಲಕ ವೆಂಕಪ್ಪ ಗೌಡ ಡೆಬ್ಬೇಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಿನೇಶ್ ಪೆರ್ಲ, ಮೋಹಿನಿ, ಅಚ್ಚುತ ನಾಯ್ಕ್ ನಕ್ಕುರಡ್ಕ, ಮೋನಪ್ಪ ಪೂಜಾರಿ ಡೆಂಬಳೆ, ಡೊಂಬಯ್ಯ ಗೌಡ ಎಣ್ಣೆತ್ತೋಡಿ, ಮೋಹಿನಿ, ವಿಶ್ವನಾಥ ಮಡಿವಾಳ, ಭಾರತಿ ಶಾಂತಿಮಾರು, ಭಾಸ್ಕರ ರೈ ತೋಟ, ವೀರಪ್ಪ ಪೂಜಾರಿ ಅಂಬರ್ಜೆ, ನೋಣಯ್ಯ ಶೆಟ್ಟಿ ಮರಂದೆ, ಶಿವರಾಮ ಶೆಟ್ಟಿ ಪಾತೃಮಾಡಿ, ವಿದ್ಯಾ ಅಗರ್ತ, ಸುರೇಶ್ ತಿರ್ಲೆ, ವೇದಕುಮಾರ್ ಜೈನ್, ಹರಿಣಿಶೇಖರ ಗೌಡ ಶಾಂತಿಮಾರು, ಮನೋಜ್ ಎಣ್ಣೆತ್ತೋಡಿ, ಸುಬ್ರಹ್ಮಣ್ಯ ಪೆಲತ್ತಿಮಾರ್ ಅವರು ಅತಿಥಿಗಳಿಗೆ ಶಾಲು ಹಾಕಿ, ಸ್ಮರಣಿಕೆ ನೀಡಿ ಗೌರವಿಸಿದರು. ಅಕ್ಷತಾ ಶಿವಾನಂದ ಸ್ವಾಗತಿಸಿ, ಯಶವಂತ ಮರಂದೆ ವಂದಿಸಿದರು. ರವೀಂದ್ರ ಟಿ.ನೆಲ್ಯಾಡಿ, ಜಯಾನಂದ ಬಂಟ್ರಿಯಾಲ್ ನೆಲ್ಯಾಡಿ ನಿರೂಪಿಸಿದರು. ವೀಣಾ ರಾಮಕೃಷ್ಣ ಭಟ್ ಆಂಜರ, ಉಷಾಪಾರ್ವತಿ, ವೈಶಾಲ್ಯ ಪ್ರಾರ್ಥಿಸಿದರು.


ವೈದಿಕ ಕಾರ್ಯಕ್ರಮ:
ಬೆಳಿಗ್ಗೆ ಉಷಾ ಪೂಜೆ, ಮಹಾಗಣಪತಿ ಹೋಮ, ಅಂಕುರ ಪೂಜೆ, ಖನನಾದಿ ಸ್ಥಳ ಶುದ್ಧಿ, ಬಿಂಬ ಶುದ್ಧಿ, ಕಲಶ ಪೂಜೆ, ಪ್ರಾಯಶ್ಚಿತ್ತ ಹೋಮ, ಚತು:ಶುದ್ಧಿ, ಧಾರಾ ಪಂಚಗವ್ಯ, ಪಂಚಕ ಕಲಶಾಭಿಷೇಕ ನಡೆಯಿತು. ಸಂಜೆ ದೀಪಾರಾಧನೆ, ಅಂಕುರ ಪೂಜೆ, ದುರ್ಗಾಪೂಜೆ, ಕುಂಡಶುದ್ಧಿ, ಮಹಾಪೂಜೆ ನಡೆಯಿತು.

ಭಜನೆ:
ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಶಾಂತಿನಗರ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಶಿವಾರು ಆಲಂತಾಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ಮಾತಾ ಮಹಿಳಾ ಭಜನಾ ತಂಡ ಗೋಳಿತ್ತೊಟ್ಟು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ, ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಿಗ್ಗೆ ಶಿಶುಮಂದಿರದ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೆ ಪೂಜಾ ಕಲಾ ತಂಡ ಗೋಳಿತ್ತೊಟ್ಟು ಇವರಿಂದ ನೃತ್ಯ ವೈಭವ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಯಜ್ಞೇಶ ಆಚಾರ್ಯ ಸುಬ್ರಹ್ಮಣ್ಯ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ, ನಂತರ ವಿದುಷಿ ರೇಷ್ಮಾ ಅಜಯ್ ಸರಳಾಯ ತಂಡದಿಂದ ನೃತ್ಯಾಂಜಲಿ ನಡೆಯಿತು.

ದೇವಸ್ಥಾನದಲ್ಲಿ ಇಂದು;
ಬ್ರಹ್ಮಕಲಶೋತ್ಸವದ 3ನೇ ದಿನವಾದ ಫೆ.7ರಂದು ವೈದಿಕ ಕಾರ್ಯಕ್ರಮ, ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಕರ್ಮಯೋಗಿ ಯೋಗಿಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ಕ್ಯಾ| ಬ್ರಿಜೇಶ್ ಚೌಟ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ರಾಮಕೃಷ್ಣ ಭಟ್ ಆಂಜರ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ, ರಾತ್ರಿ ಯಕ್ಷಗಾನ ನಾಟ್ಯ ವೈಭವ ನಡೆಯಲಿದೆ.

LEAVE A REPLY

Please enter your comment!
Please enter your name here