ಆಲಂಕಾರು:ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ 2023-24ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿವಿಧ ಹಂತದ ಪಂಚಾಯತಿಗಳ ಮತ್ತು ಅನುಷ್ಠಾನ ಇಲಾಖೆಗಳನ್ನು ಗುರುತಿಸಿ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರು.
2023-24ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತಿಗಳು ಅನುಷ್ಠಾನ ಇಲಾಖೆಗಳನ್ನು ಗುರುತಿಸಿ ನರೇಗಾ ಹಬ್ಬ ಸಮಾರಂಭದಲ್ಲಿ ಆಲಂಕಾರು ಗ್ರಾ.ಪಂಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
![](https://puttur.suddinews.com/wp-content/uploads/2025/02/ad7c41c9-cde9-450c-9c07-eefc2e698c5a.jpg)
ನರೇಗಾ ಹಬ್ಬ-2025 ಫೆ.5 ರಂದು ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು ಪ್ರಶಸ್ತಿಯನ್ನು ಸಚಿವರಾದ ಪ್ರಿಯಾಂಕ ಖರ್ಗೆ,ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲ, ಅಭಿವೃದ್ಧಿ ಅಧಿಕಾರಿ ಸುಜಾತ .ಕೆ,ಉಪಾಧ್ಯಕ್ಷ ರವಿಪೂಜಾರಿ .ಕೆ,ಕಾರ್ಯದರ್ಶಿ ವಸಂತ ಶೆಟ್ಟಿ ಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.