ಉಪ್ಪಿನಂಗಡಿ: ಪ್ರತಿಷ್ಠಿತ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ.
ಕಳೆದ ಫೆ.2ರಂದು ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯ 11 ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದರು. ಸಹಕಾರ ಭಾರತಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದ್ದರಿಂದ ಎಲ್ಲಾ 12 ಸ್ಥಾನಗಳು ಸಹಕಾರ ಭಾರತಿಯ ಅಭ್ಯರ್ಥಿಗಳ ಪಾಲಾಗಿತ್ತು. ಫೆ.11ರಂದು ಇವರೊಳಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಸುನೀಲ್ ಕುಮಾರ್ ದಡ್ಡು ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ದಯಾನಂದ ಸರೋಳಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಸುನೀಲ್ ಕುಮಾರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.