ಪುತ್ತೂರು: ಶ್ರೀ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವದಲ್ಲಿ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲ ,ವಿಟ್ಲ ಶೌರ್ಯ ತಂಡ ದ ಸದಸ್ಯರು ಶ್ರಮದಾನ ಸೇವೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಸ್ಥರಾದ ಪುಷ್ಪರಾಜ್ ಜೈನ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ,ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್,ಯೋಜನಾಧಿಕಾರಿ ರಮೇಶ್ ,ಕೃಷಿ ಅಧಿಕಾರಿ ಚಿದಾನಂದ, ವಿಟ್ಲ ಮೇಲ್ವಿಚಾರಕರಾದ ಸರಿತಾ ಹಾಗು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲದ ಸದಸ್ಯರಾದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಹಾಗೂ ಪೆರ್ಲಾಪು ತಾರಾನಾಥ ಮತ್ತು ವಿಟ್ಲ ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರಾದ ಕೆ.ವಸಂತ ಗೌಡ ಉಪಸ್ಥಿತರಿದ್ದರು.