ಫೆ.16: ಅಕ್ಷಯ ಕಾಲೇಜಿನಲ್ಲಿ ದಿಕ್ಸೂಚಿ ಕಾರ್ಯಕ್ರಮ

0

ಪುತ್ತೂರು: ಪುತ್ತೂರಿನಲ್ಲಿ ವಿನೂತನ ಪದವಿ ಕೋರ್ಸುಗಳನ್ನು ಪರಿಚಯಿಸಿ ಶೈಕ್ಷಣಿಕ ಕ್ಷೇತ್ರದೊಂದಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲೂ ಹಲವು ಸಾಧನೆ ಮಾಡುತ್ತಿರುವ ಸಂಪ್ಯದ ಅಕ್ಷಯ ಕಾಲೇಜಿನಲ್ಲಿ ಫೆ.16ರಂದು ಬೆಳಿಗ್ಗೆ 10 ಗಂಟೆಯಿಂದ 12.30 ರ ವರೆಗೆ ದಿಕ್ಸೂಚಿ-4 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಏನಿದು ದಿಕ್ಸೂಚಿ?
ಕಳೆದ 3 ವರ್ಷಗಳಿಂದ ಸಂಸ್ಥೆಯು ಪುತ್ತೂರು ಹಾಗು ಪುತ್ತೂರಿನ ಆಸುಪಾಸಿನ ತಾಲೂಕುಗಳ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಬಳಿಕ ಇರುವ ಆಯ್ಕೆ, ವೃತ್ತಿ ಶಿಕ್ಷಣಕ್ಷೇತ್ರದ ಪ್ರಾಮುಖ್ಯತೆ ವಿಷಯಗಳಲ್ಲಿ ಸಮಗ್ರ ರೂಪುರೇಷೆಯನ್ನು ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿದೆ.


ದಿಕ್ಸೂಚಿ-4 ವಿಶೇಷತೆಯೇನು?
ಪ್ರಸ್ತುತ ಆಯೋಜಿಸಿರುವ ದಿಕ್ಸೂಚಿ-4ರಲ್ಲಿ ವಿಶೇಷವಾಗಿ ದ್ವಿತೀಯ ಪಿ.ಯು.ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಅತ್ಯುತ್ತಮವಾಗಿ ಪರೀಕ್ಷೆಯಲ್ಲಿ ಉತ್ತರಿಸುವ ಬಗೆ, ಪರೀಕ್ಷೆಯಲ್ಲಿ ಸಮಯದ ನಿರ್ವಹಣೆ, ಅತ್ಯುತ್ತಮ ಅಂಕಗಳಿಸುವಲ್ಲಿ ಬೇಕಾದ ಪೂರ್ವಸಿದ್ದತೆ, ವಿಷಯವನ್ನು ಮನನ ಮಾಡಿಕೊಳ್ಳುವ ವಿಧಾನ ಇವೇ ಮೊದಲಾದ ಅತ್ಯುತ್ತಮ ಮತ್ತು ವಿಶೇಷ ಮಾರ್ಗದರ್ಶನವನ್ನು ಸಂಪನ್ಮೂಲ ವ್ಯಕ್ತಿ, ರಾಮಕುಂಜ ಪ್ರೌಢ ಶಾಲೆ ಮುಖ್ಯೋಪಾದ್ಯಾಯಸತೀಶ್ ಬಿಳಿನೆಲೆ ನೀಡಲಿದ್ದಾರೆ.


ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿಯ ಕಿಟ್ ನೀಡಲಿದ್ದು ಯಾವುದೇ ದಾಖಲಾತಿ ಶುಲ್ಕವಿರುವುದಿಲ್ಲ ಹಾಗೂ ಮಧ್ಯಾಹ್ನ ಭೋಜನದ ವ್ಯವಸ್ಥೆಯಿದೆ. ಈ ಉತ್ತಮ ಮಾರ್ಗದರ್ಶಿ ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳನ್ನು ಅವರ ಹೆತ್ತವರು ಅಪೇಕ್ಷಿತರು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ:8088381678, 9141160704 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here