ಪುತ್ತೂರು: ಬನ್ನೂರು ಅಯೋಧ್ಯಾನಗರ ಶ್ರೀ ಶಿವಪಾರ್ವತಿ ಮಂದರದಲ್ಲಿ ಸಾರ್ವಜನಿಕ ಶ್ರೀ ದುರ್ಗಾನಮಸ್ಕಾರ ಪೂಜೆಯು ಪುರೋಹಿತ ರಘುರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಗಣಪತಿ ಹೋಮ, ಮಧ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತೂರು ಆದರ್ಶ ಆಸ್ಪತ್ರೆಯ ಡಾ. ಎಂ.ಕೆ.ಪ್ರಸಾದ್ ಅವರು ಉದ್ಘಾಟಿಸಿದರು.
ಇದೆ ಸಂದರ್ಭ ಮಂದಿರದ ವತಿಯಿಂದ ಅವರನ್ನು ಗೌರವಿಸಲಾಯಿತು. ಶಿವಪಾರ್ವತಿ ಮಂದಿರದ ಮಾಜಿ ಅಧ್ಯಕ್ಷರಾಗಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು ಅವರು ಅತಿಥಿಗಳಾಗಿ ಭಾಗವಹಿಸಿದ್ದರು. ನಗರಸಭೆ ಸದಸ್ಯೆ ಮೋಹಿನಿ ವಿಶ್ವನಾಥ್, ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ಮೋಹನ್ ಜೈನ್, ಶೇಖರ್ ಬಿರ್ವ, ರಾಧಾಕೃಷ್ಣ ಗೌಡ ದಯಾನಂದ, ರತ್ನಾಕರ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.