ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು ವತಿಯಿಂದ ರಾಷ್ಟ್ರ ಜಾಗರಣದ ಕಾರ್ಯಕ್ಕಾಗಿ ಫೆ.17ರಂದು ಸಂಜೆ ಗಂಟೆ 3ಕ್ಕೆ ಬನ್ನೂರು ಹವ್ಯಕ ಭವನದಲ್ಲಿ ಯುವ ಸಮಾವೇಶ ನಡೆಯಲಿದೆ.
ಆದರ್ಶ ಆಸ್ಪತ್ರೆಯ ಡಾ. ಎಂ.ಕೆ.ಪ್ರಸಾದ್ ಅವರು ಯುವ ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಕ್ಷೇತ್ರಿಯ ಸಂಘಟಕ ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಕಟಣೆ ತಿಳಿಸಿದೆ.