ಪುತ್ತೂರು: ಕಡ್ಡಾಯ ಶಿಕ್ಷಣ ಕಾಯಿದೆಯನ್ವಯ ಶಿಕ್ಷಣ ಎಲ್ಲರ ಮೂಲಭೂತ ಹಕ್ಕಾಗಿದೆ. ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತಂದು ಅವರಿಗೆ ಗುಣಾತ್ಮಕ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ದಾಖಲಾತಿ ಆಂದೋಲನ ಅತ್ಯಂತ ಪ್ರಾಮುಖ್ಯವಾಗಿದೆ ಎಂದು ಮುಂಡೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮನ್ಮಥ ಹೇಳಿದರು. ಮುಂಡೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆದ ಶಾಲಾ ದಾಖಲಾತಿ ಆಂದೋಲನದ ಕರ ಪತ್ರವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ನರಿಮೊಗರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು, ಮುಂಡೂರು ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ, ಎಸ್‌ಡಿಎಂಸಿ ಉಪಾಧ್ಯಕ್ಷೆ ಜ್ಯೋತಿ, ಗುತ್ತಿಗೆದಾರರಾದ ರಾಜಕುಮಾರ್ ಬೆದ್ರಾಳ, ಸತೀಶ, ಎಸ್‌ಡಿಎಂಸಿ ಸದಸ್ಯರು, ಪೋಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ವಿಜಯ ಪಿ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ಬಿ ವಂದಿಸಿದರು. ಸಹಶಿಕ್ಷಕಿ ಮೂಕಾಂಬಿಕಾ ಸಿ ಎಚ್ ಕಾರ್ಯಕ್ರಮ ನಿರೂಪಿಸಿದರು.