ಪುತ್ತೂರು: ತಿಂಗಳಾಡಿ ಶ್ರೀ ಕೃಷ್ಣ ಮಿತ್ರ ವೃಂದದ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಸಾಂಸ್ಕೃತಿಕ ವೈಭವ ,ತುಳು ನಾಟಕ ಫೆ.15 ರಂದು ತಿಂಗಳಾಡಿ ಶ್ರೀ ಕ್ಷೇತ್ರ ದೇವಗಿರಿಯಲ್ಲಿ ನಡೆಯಿತು.
ಸಂಜೆ ಕೃಷ್ಣಕುಮಾರ್ ಉಪಾದ್ಯಾಯ ಪಟ್ಲಮೂಲೆಯವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಆರಂಭಗೊಂಡಿತು. ಈ ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮ ದಂಗವಾಗಿ ಸಾಂದಿಪನಿ ವಿದ್ಯಾಸಂಸ್ಥೆಗಳು ನರಿಮೊಗರು ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಮನರಂಜಿಸಿತು. ರಾತ್ರಿ ಶ್ರೀ ಶನೈಚ್ಚರ ಪೂಜೆಯ ಮಂಗಳಾರತಿ ಬಳಿಕ ಪ್ರಸಾದ ವಿತರಣೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಶ್ರೀ ಕೃಷ್ಣ ಮಿತ್ರವೃಂದದ ಅಧ್ಯಕ್ಷ ರಾಧಾಕೃಷ್ಣ ರೈ ಚಾವಡಿಯವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಬಿ.ಗಣರಾಜ ಭಟ್ ಕೆದಿಲರವರು ಹಿಂದೂ ಧರ್ಮದ ಆಚಾರ ವಿಚಾರ ಸಂಸ್ಕಾರ, ಸಂಸ್ಕೃತಿಗಳ ಬಗ್ಗೆ ಉಪನ್ಯಾಸ ನೀಡಿದರು. ಅತಿಥಿಗಳಾಗಿ ಸಂಪ್ಯ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಗೌರವಾಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ, ನರಿಮೊಗರು ಸಾಂದಿಪನಿ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ತೆರಿಗೆ ಸಲಹೆಗಾರರಾದ ಕೃಷ್ಣ ಎಂ ಅಳಿಕೆ, ಶ್ರೀ ದೇವತಾ ಭಜನಾ ಮಂದಿರದ ಅಧ್ಯಕ್ಷ ಜಯರಾಮ ರೈ ಮಿತ್ರಂಪಾಡಿರವರುಗಳು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ, ಸ್ಪಂದನಾ ಸೇವಾ ಬಳಗದ ಅಧ್ಯಕ್ಷ ರತನ್ ರೈ ಕುಂಬ್ರ ಭಾಗವಹಿಸಿದ್ದರು.

ರೂಪಿಕಾ ಸತೀಶ್ ರೈ ಪ್ರಾರ್ಥಿಸಿದರು. ಮಿತ್ರವೃಂದದ ಗೌರವ ಅಧ್ಯಕ್ಷರಾದ ಗಣೇಶ್ ರೈ ಮಿತ್ರಂಪಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಧನಂಜಯ ಗೌಡ ವಂದಿಸಿದರು. ರತ್ನಾಕರ ರೈ ಕೆದಂಬಾಡಿಗುತ್ತು ಮತ್ತುಶರತ್ ಗೌಡ ಗುತ್ತು ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕೃಷ್ಣ ಮಿತ್ರವೃಂದದ ಪದಾಧಿಕಾರಿಗಳು ಸಹಕರಿಸಿದ್ದರು. ರಾತ್ರಿ ತುಳುವರೆ ಉಡಲ್ ಜೋಡುಕಲ್ಲು ಕಲಾವಿದರಿಂದ ತನಿಯಜ್ಜೆ ಎಂಬ ವಿಭಿನ್ನ ಶೈಲಿಯ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.ಊರಪರವೂರ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.