ಪುತ್ತೂರು: ಬನ್ನೂರು ಕರ್ಮಲ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.22 ಮತ್ತು 23ರಂದು ಜಾತ್ರಾ ಮಹೋತ್ಸವ ನಡೆಯಲಿದೆ.
ಫೆ.22ರಂದು ಬೆಳಿಗ್ಗೆ 8ರಿಂದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ಸಾಮೂಹಿಕ ಆಶ್ಲೇಷ ಬಲಿ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಶ್ರೀದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ಸಂಗಮ್ ಬ್ರದರ್‍ಸ್ ಪುತ್ತೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಫೆ.23ರಂದು ಬೆಳಿಗ್ಗೆ 9ರಿಂದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಶ್ರೀದೇವಿ ದರ್ಶನ, ಅಭಯ ನುಡಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ ದೈವಗಳ ಭಂಡಾರ ಬಂದು ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ. ಕೀರ್ತಿ ಶೇಷ ಚಿದಾನಂದ ಕಾಮತ್ ಕಾಸರಗೋಡು ಇವರ ಶಿಷ್ಯ ವರ್ಗದ ಡಿಂಡಿಮ ಕಲಾವಿದರಿಂದ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಮುರಳಿ ಬ್ರದರ್ಸ್ ಡ್ಯಾನ್ಸ್ ಕ್ರ್ಯೂ ನೆಹರೂನಗರ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.