ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಗಾರ ಫೆ.17ನಡೆಯಿತು.
ಸಂಪನ್ಮೂಲ ವ್ಯಕ್ತಿ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ರವರು ವಿದ್ಯಾರ್ಥಿಗಳಿಗೆ ಪರೀಕ್ಷೆ ತಯಾರಿ, ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಉತ್ತಮ ಅಂಕಗಳನ್ನು ಕ್ರೋಢಿಕರಿಸುವುದರ ಕುರಿತು ಉತ್ತಮ ನಿದರ್ಶನಗಳ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಶಾಂತಿ ಆಗ್ನೇಸ್ ಬಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಬೃಂದಾ ಕಾರ್ಯಕ್ರಮ ನಿರೂಪಿಸಿ ಭಗಿನಿ ಗ್ರೇಸಿ ವಂದಿಸಿದರು.