ಫೆ.22- 23; ತಾಲೂಕು ಯುವ ಬಂಟರ ಸಂಘದ ಸಾರಥ್ಯದಲ್ಲಿ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ “ಪುತ್ತೂರ್ದ ಬಂಟ ಜವನೆರೆ ಗೊಬ್ಬು”

0

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಸಾರಥ್ಯದಲ್ಲಿ ಸಹಕಾರಿ ಧುರೀಣ ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ “ಪುತ್ತೂರ್ದ ಬಂಟ ಜವನ್ರೆರೆ ಗೊಬ್ಬು”( ಬಂಟ್ಸ್ ಪ್ರೀಮಿಯರ್ ಲೀಗ್-2025) ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22 ಮತ್ತು 23ರಂದು ಪುತ್ತೂರು ತಾಲೂಕು ಕೊಂಬೆಟ್ಟು ಕ್ರೀಡಾಂಗಣದಲ್ಲಿ ಜರಗಲಿದೆ.

ಫೆ.22 ರಂದು ಬೆಳಿಗ್ಗೆ 8.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ದ.ಕ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಪಂದ್ಯಾಟ ಉದ್ಘಾಟನೆ ಮಾಡಲಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟುರವರು ಧ್ವಜಾರೋಹಣ ಮಾಡಲಿದ್ದಾರೆ. ತಾಲೂಕು ಬಂಟರ ಸಂಘದ ನಿರ್ದೇಶಕ ದಂಬೆಕ್ಕಾನ ಸದಾಶಿವ ರೈಯವರು ಕ್ರೀಡಾಪಟುಗಳಿಗೆ ಪ್ರಮಾಣವಚನವನ್ನು ಭೋಧಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅನೇಕ ಮಂದಿ ಉಪಸ್ಥಿತರಿದ್ದಾರೆ. ಮಧ್ಯಾಹ್ನ ೧೧ ಗಂಟೆಗೆ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ ಕುಮಾರ್ ರೈಯವರು ಮಾಡಲಿದ್ದಾರೆ. ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಂಸದಬ್ರಿಜೇಶ್ ಚೌಟ, ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ದಿ.ಜೀವನ್ ಭಂಡಾರಿಯವರ ಪತ್ನಿ ಸ್ಮಿತಾ ಜೀವನ್ ಭಂಡಾರಿ ಸಿದ್ಯಾಳ, ಕುತ್ಯಾಡಿ ಸತೀಶ್ ರೈ ಕ್ರೀಡಾ ದತ್ತಿನಿಧಿ ವಿತರಣೆಯನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಯಾನಂದ ರೈ ಕೊರ್ಮಂಡರವರು ನೆರವೇರಿಸಲಿದ್ದಾರೆ.

ಫೆ.೨೩ ರಂದು ಸಮಾರೋಪ ಸಮಾರಂಭ ಸಂಜೆ ೪.೩೦ ರ ಬಳಿಕ ನಡೆಯಲಿದ್ದು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ರವರು ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅನೇಕ ಮಂದಿ ಭಾಗವಹಿಸಲಿದ್ದಾರೆ ಎಂದು ಪುತ್ತೂರ್ದ ಬಂಟ ಜವನ್ರೆರೆ ಗೊಬ್ಬು ಸಮಿತಿಯ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮುಖ್ಯ ಕಾರ್ಯನಿರ್ವಣಾಧಿಕಾರಿ ದಯಾನಂದ ರೈ ಕೋರ್ಮಂಡ, ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಕ್ರೀಡಾ ಸಂಚಾಲಕ ಕಾರ್ತಿಕ್ ರೈ, ಪ್ರಧಾನ ಕಾರ್‍ಯದರ್ಶಿಗಳಾದ ರಂಜಿನಿ ಶೆಟ್ಟಿ, ಪ್ರಜ್ವಲ್ ರೈ ಸೊರಕೆ ಹಾಗೂ ಕೋಶಾಧಿಕಾರಿ ಶಿವಶ್ರೀರಂಜನ್ ರೈ ದೇರ್ಲರವರು ತಿಳಿಸಿದ್ದಾರೆ.


“ಪುತ್ತೂರ್ದ ಬಂಟ ಜವನೆರೆ ಗೊಬ್ಬು”( ಬಂಟ್ಸ್ ಪ್ರೀಮಿಯರ್ ಲೀಗ್-2025)
ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನ ರೂ. 75 ಸಾವಿರ ಹಾಗೂ ಆಕರ್ಷಕ ಟ್ರೋಪಿ, ದ್ವಿತೀಯ ಬಹುಮಾನ ರೂ.50 ಸಾವಿರ ಹಾಗೂ ಆಕರ್ಷಕ ಟ್ರೋಫಿ ಇರಲಿದ್ದು, ಉದ್ಘಾಟನಾ ಪಂದ್ಯಾಟದಲ್ಲಿ ಸಂಸದರು, ಶಾಸಕರು ಸೇರಿದಂತೆ 50 ವರ್ಷ ದಾಟಿದ ಪುತ್ತೂರಿನ ಯುವ ಸಾಮಾಜಿಕ ಮುಂದಾಳುಗಳು ಭಾಗವಹಿಸಲಿದ್ದಾರೆ. ಬಂಟರ ಸಂಘದ 50 ವರ್ಷ ದಾಟಿದ ನಾಯಕರು ಆರಂಭಿಕ ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಂದ್ಯಾಟಕ್ಕೆ ಪೂರ್ಣ ಸಹಕಾರವನ್ನು ನೀಡುವಂತೆ ವಿನಂತಿ.

  • ಹರ್ಷಕುಮಾರ್ ರೈ ಮಾಡಾವು ಅಧ್ಯಕ್ಷರು, ಯುವ ಬಂಟರ ಸಂಘ ಪುತ್ತೂರು ತಾಲೂಕು

LEAVE A REPLY

Please enter your comment!
Please enter your name here