ಪುತ್ತೂರು: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಇತ್ತೀಚೆಗೆ ಅಗಲಿದ ಶ್ರೀಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘದ ಪ್ರಧಾನ ಕಾರ್ಯದರ್ಶಿ ಪ್ರದೀಪ ರೈ ಕೇಕನಾಜೆ ಹಾಗೂ ಸದಸ್ಯರಾದ ರಾಮಯ್ಯ ರೈ ಕಕ್ಕೂರು ಇವರಿಗೆ ಶ್ರೀಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘ ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಶ್ರೀಕ್ಷೇತ್ರ ಬೆಟ್ಟಂಪಾಡಿ, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಬೆಟ್ಟಂಪಾಡಿ, ಶ್ರೀಮಹಾಲಿಂಗೇಶ್ವರ ಭಜನಾ ಸಂಘ ಬೆಟ್ಟಂಪಾಡಿ, ಯಕ್ಷಗಾನ ಬಯಲಾಟ ಸೇವಾ ಸಮಿತಿ ಬೆಟ್ಟಂಪಾಡಿ, ಶ್ರೀದುರ್ಗಾ ಪೂಜಾ ಸಮಿತಿ ಬೆಟ್ಟಂಪಾಡಿ, ಶ್ರೀಮಹಾಲಿಂಗೇಶ್ವರ ಮಹಿಳಾ ಭಜನಾ ಸಂಘ ಬೆಟ್ಟಂಪಾಡಿ, ಶ್ರೀವರಮಹಾಲಕ್ಷ್ಮಿ ಪೂಜಾ ಸಮಿತಿ ಬೆಟ್ಟಂಪಾಡಿ ಇದರ ಸಹಭಾಗಿತ್ವದಲ್ಲಿ ಶ್ರದ್ಧಾಂಜಲಿ ಸಭೆ ಫೆ.22ರಂದು ಸಂಜೆ 5.30ಕ್ಕೆ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.