
ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ದೃಷ್ಠಿಯಿಂದ ರಾತ್ರಿ ಶಾಲೆಯ ವಿಶೇಷ ತರಗತಿಗಳು ಆರಂಭಗೊಂಡಿದೆ.
ರಾತ್ರಿ ಶಾಲಾ ವಿಶೇಷ ತರಗತಿಯ ಉದ್ಘಾಟನೆಯನ್ನು ನಿವೃತ್ತ ಮುಖ್ಯ ಶಿಕ್ಷಕ ಗುಮ್ಮಣ್ಣ ಗೌಡ ನೆರವೇರಿಸಿ ವಿದ್ಯಾರ್ಥಿಗಳಿಗೆ ರಾತ್ರಿ ಶಾಲೆಯ ಮಹತ್ವದ ಬಗ್ಗೆ ತಿಳಿಸಿದರು. ಶಾಲಾ ಮುಖ್ಯಗುರು ಸತೀಶ್ ಭಟ್ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ತರಗತಿಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಹಿರಿಯ ಶಿಕ್ಷಕಿ ಉಷಾ ಕುಮಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದ, ಹಿರಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.