ಉಪ್ಪಿನಂಗಡಿ : ವಿದ್ಯಾರ್ಥಿ ಜೀವನದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯು ಒಂದು ನಿರ್ಣಾಯಕ ಘಟ್ಟವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ವರ್ಷಪೂರ್ತಿ ಓದಿದ್ದರೂ, ಪರೀಕ್ಷೆ ಸಮೀಪಿಸುತ್ತಿರುವಾಗ ಒತ್ತಡಕ್ಕೆ ಒಳಗಾಗುವುದು ಸಹಜ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾನಸಿಕ ಸ್ಥಿತಿಯನ್ನು ಕಾಯ್ದುಕೊಂಡು, ಪರೀಕ್ಷಾ ತಯಾರಿಯನ್ನು ಹೇಗೆ ನಡೆಸಬೇಕು ಎನ್ನುವುದರ ಕುರಿತು ಮಾಹಿತಿ ಕಾರ್ಯಗಾರವನ್ನು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೃಷ್ಣಮೂರ್ತಿ ಕೆದಿಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ವಿದ್ಯಾರ್ಥಿಯು ತನ್ನಲ್ಲಿ ಹುದುಗಿರುವ ಅದಮ್ಯ ಚೈತನ್ಯವನ್ನು ಧನಾತ್ಮಕ ಚಿಂತನೆಯೊಂದಿಗೆ ಕೆಲವು ಉಪಯುಕ್ತ ತಂತ್ರಗಳಾದ ಪುರ್ಮನನ, ಟಿಪ್ಪಣಿ ಮಾಡಿಕೊಳ್ಳುವುದು, ಧ್ಯಾನವನ್ನು ಮಾಡುವ ಮೂಲಕ ಅಪೇಕ್ಷಿತ ಯಶಸ್ಸು ಗಳಿಸಲು ಸಾಧ್ಯ. ಪರೀಕ್ಷಾ ಸಿದ್ಧತೆಯೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಮುಂಬರುವ ಪರೀಕ್ಷೆಯನ್ನು ಆತ್ಮವಿಶ್ವಾಸದೊಂದಿಗೆ ಎದುರುಸಿ ಯಶಸ್ಸುನ್ನು ಗಳಿಸುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕರಾದ ಸುಬ್ರಹ್ಮಣ್ಯ ಭಟ್ ಕೆದಿಲ, ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.