ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೊಳ್ಳಾಡಿ ಪುನರಾಯ್ಕೆ,ಕಾರ್ಯದರ್ಶಿಯಾಗಿ ಶಮಿತ್ ರೈ ಕುಂಬ್ರ ಆಯ್ಕೆ

0

ಪುತ್ತೂರು: ಒಳಮೊಗ್ರು ಗ್ರಾಮದ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಉದ್ಯಮಿ ಅಶೋಕ್ ಪೂಜಾರಿ ಬೊಳ್ಳಾಡಿಯವರು ಪುನರಾಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಸಮಿತ್ ರೈ ಕುಂಬ್ರರವರನ್ನು ಆಯ್ಕೆ ಮಾಡಲಾಗಿದೆ.

ಶಾಸಕ ಅಶೋಕ್ ಕುಮಾರ್ ರೈಯವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರವರು ನೇಮಕಗೊಳಿಸಿ ಆದೇಶಿಸಿದ್ದಾರೆ. ಅಶೋಕ್ ಪೂಜಾರಿ ಬೊಳ್ಳಾಡಿಯವರು ಪ್ರಗತಿಪರ ಕೃಷಿಕರೂ, ಉದ್ಯಮಿಯೂ ಆಗಿದ್ದು ಕುಂಬ್ರ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಕುಂಬ್ರ ಕೆಪಿಎಸ್ ಶಾಲಾ ಮೇಲಸ್ತುವಾರಿ ಸಮಿತಿ ಸದಸ್ಯ, ಗ್ಯಾರಂಟಿ ಸಮಿತಿ ಸದಸ್ಯ, ಪಾಪೆಮಜಲು ಬ್ರಹ್ಮಬೈದೆರ್ಕಳ ಗರಡಿಯ ಆಡಳಿತ ಸಮಿತಿಯ ಸದಸ್ಯರೂ ಆಗಿದ್ದಾರೆ. ಶಮಿತ್ ರೈ ಕುಂಬ್ರರವರು ಯುವ ಉದ್ಯಮಿಯಾಗಿದ್ದಾರೆ.

LEAVE A REPLY

Please enter your comment!
Please enter your name here