ಅರಿಯಡ್ಕ: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಹತ್ತಿರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಸುಮಾರು ಅರ್ಧ ಎಕರೆಯಷ್ಟು ಬೆಂಕಿ ವ್ಯಾಪಿಸಿದೆ. ಬೆಂಕಿಯ ಹರಡುವಿಕೆಗೆ ಗಿಡ, ಮರಗಳು ನಾಶಗೊಂಡಿದೆ.

ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು , ಮತ್ತು ಸದಸ್ಯರು ಹಾಗೂ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದರು.