ವಿದ್ಯಾರಶ್ಮಿ ಪ್ರೀಮಿಯರ್ ಲೀಗ್ ಟ್ರೋಫಿ ಅನಾವರಣ

0

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ VPL ಕ್ರಿಕೆಟ್ ನ ಮೂರನೇ ಸಿರೀಸ್ ಫೆ.27. 2025 ರಂದು ಆರು ತಂಡಗಳ ಮದ್ಯೆ ನಡೆಯಲಿದ್ದು, ಆ ಪ್ರಯುಕ್ತ ಟ್ರೋಫಿಯನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ ಸೀತಾರಾಮ ರೈ ಯವರು ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು.


ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ನ್ಯಾಯವಾದಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಗಳಾದ ರಶ್ಮಿ ಅಶ್ವಿನ್ ಶೆಟ್ಟಿ,
ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜಲಕ್ಷ್ಮೀ ಎಸ್. ರೈ, ಉಪಪ್ರಾಂಶುಪಾಲರಾದ ಎಮ್. ಶೇಷಗಿರಿ ಉಪಸ್ಥಿತರಿದ್ದರು. ಟ್ರೋಫಿಯನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಿಂದ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸವಣೂರಿನ ಜೈನ ಬಸದಿಗೆ ಕೊಂಡೊಯ್ದು ಪೂಜೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here