ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಮಾ.2 ರಂದು ನಡೆಯಲಿದ್ದು ಆಲಂಕಾರು ಲಕ್ಷ್ಮಿ ರಾಮ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಬೆಂಬಲಿತ ಸಹಕಾರ ಭಾರತಿ ಚುನಾವಣಾ ಕಛೇರಿಯನ್ನು ಸುಳ್ಯಮಂಡಲ ಬಿ.ಜೆ.ಪಿ ಅಧ್ಯಕ್ಷ ವೆಂಕಟ್ ವಳಲಂಬೆ ಉದ್ಘಾಟಿಸಿ, ಮಾತನಾಡಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯು ಮಾ.2 ರಂದು ನಡೆಯಲಿದ್ದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯಾಪ್ತಿಯ ಆರು ಗ್ರಾಮಗಳ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯಿಂದ ಅಧಿಕೃತವಾಗಿ ಘೋಷಣೆಯಾದ 12 ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸುವಂತೆ ವಿನಂತಿಸಿದರು.

ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುಳ್ಯಮಂಡಲ ಬಿ.ಜೆ.ಪಿ ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಮಂಡಲ, ಜಿಲ್ಲಾ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ,ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.