ನಿಡ್ಪಳ್ಳಿ: ಇಲ್ಲಿಯ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಫೆ.27ರಂದು ನಡೆಯಿತು.
ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ರೇಖಾ ನೊಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಿಡಿಒ ಸಂಧ್ಯಾಲಕ್ಷ್ಮೀ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾಹಿತಿ ನೀಡಿದರು.