32ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

0

ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಕೆ ಎಸ್ ಅವರ ಗೌರವ ಸಂಚಾಲಕತ್ವದಲ್ಲಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿರವರ ಗೌರವ ಉಪಸ್ಥಿತಿಯಲ್ಲಿ ಇತಿಹಾಸ ಪ್ರಸಿದ್ಧ ತುಳುನಾಡ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಇಂದು(ಮಾ.1) ಚಾಲನೆ ನೀಡಲಾಯಿತು.

32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಚಾಲನೆ ದೊರಕಿತು. ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸಮಿತಿಯ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆಯವರು ನೆರವೇರಿಸಿದರು. ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಅಧ್ಯಕ್ಷತೆ ವಹಿಸಿದ್ದರು.ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಸಂಜೆ ಸಭಾ ಕಾರ್ಯಕ್ರಮ ಕೀರ್ತಿಶೇಷ ಜಯಂತ ರೈ ವೇದಿಕೆಯಲ್ಲಿ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್, ಗೃಹ ಸಚಿವ ಡಾ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಕ್ಯಾ| ಬ್ರಿಜೇಶ್ ಚೌಟ, ಬೆಂಗಳೂರು ಎಂ.ಆರ್.ಜಿ ಗ್ರೂಪ್ಸ್‌ನ ಚೇರ್‌ಮೆನ್ ಪ್ರಕಾಶ್ ಶೆಟ್ಟಿ, ಮಂಡ್ಯ ವಿಧಾನಪರಿಷತ್ ಸದಸ್ಯ ರವಿ ಗಾಣಿಗ, ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತಿರರ ಗಣ್ಯರು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆಯ ಸಮಾರಂಭದ ಬಳಿಕ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ವಿಜೇತ ಕೋಣಗಳಿಗೆ ಚಿನ್ನ, ಕೂಟದ ಓಟಗಾರರಿಗೂ ಬಹುಮಾನ, ಮಾಲಕರಿಗೆ ಟ್ರೋಪಿ
ಕಂಬಳಕ್ಕೆ ಆರು ವಿಭಾಗಗಳ ಕೋಣಗಳ ಭಾಗವಹಿಸಿದ್ದು, ಕನೆಹಲಗೆ, ಅಡ್ಡ ಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು, ಹಿರಿಯ ವಿಭಾಗದ ಪ್ರಥಮ ವಿಜೇತ ಕೋಣಗಳಿಗೆ 2 ಪವನ್ ಚಿನ್ (16ಗ್ರಾಂ), ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ 1 ಪವನ್ ಹಾಗೂ ದ್ವಿತೀಯ ಅರ್ಧ ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ವಿಜೇತ ಕೋಣಗಳ ಯಜಮಾನರುಗಳಿಗೆ ಚಿನ್ನದೊಂದಿಗೆ ಕೋಟಿ ಚೆನ್ನಯ ಟ್ರೋಪಿ ನೀಡಿ ಗೌರವ ಇರಲಿದೆ.

LEAVE A REPLY

Please enter your comment!
Please enter your name here