VCET ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಪ್ರೊ.ಪ್ರದೀಪ್ ಕುಮಾರ್.ಕೆ.ಜಿ ಪದ ಸ್ವೀಕಾರ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಪ್ರೊ.ಪ್ರದೀಪ್ ಕುಮಾರ್.ಕೆ.ಜಿ ಪದ ಸ್ವೀಕಾರ ಮಾಡಿದ್ದಾರೆ.15 ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ನಿರ್ವಹಣೆಯಲ್ಲಿಯೂ ಚಾಕಚಕ್ಯತೆಯನ್ನು ಹೊಂದಿರುವ ಇವರು ವಿಭಾಗವನ್ನು ಸಮರ್ಥವಾಗಿ ಮುನ್ನಡೆಸಬಲ್ಲವರಾಗಿದ್ದಾರೆ. ಮಾಹಿತಿ ತಂತ್ರಜ್ಞಾನದಲ್ಲಿ ಪ್ರತಿಬಿಂಬ ಸಂಸ್ಕರಣೆ ಎನ್ನುವ ವಿಷಯದಲ್ಲಿ ಸಂಶೋಧನೆಯನ್ನು ನಡೆಸುತ್ತಿದ್ದು, ಇವರ ಸಂಶೋಧಿತ ಬರಹಗಳು 10ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here