ಪುತ್ತೂರು: ಮಹಾಶಿವರಾತ್ರಿಯ ಅಂಗವಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಖಿಲ ಭಾರತ ಸಂಗೀತ ನೃತ್ಯ ಕಲಾವಿದರ ಒಕ್ಕೂಟದಿಂದ ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶ್ವ ಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆಂಡ್ ಕಲ್ಚರ್ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಜರಗಿತು.
ವಿಶ್ವ ಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆಂಡ್ ಕಲ್ಚರ್ ಇದರ ನೃತ್ಯಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ನಯನಾ ವಿ.ರೈ ಹಾಗೂ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ಅಖಿಲ ಭಾರತೀಯ ಸಂಗೀತ ಮತ್ತು ನೃತ್ಯ ಕಲಾ ಒಕ್ಕೂಟದ ಸಂಘಟಕರಾದ ಸಾಯಿನಾರಾಯಣ ಕಲ್ಮಡ್ಕ ಮತ್ತು ಕೃಷ್ಣಗೋಪಾಲ ಪೂಂಜಾಲಕಟ್ಟೆಯವರು ನೃತ್ಯಗುರುಗಳಾದ ವಿದುಷಿ ನಯನಾ ವಿ.ರೈ, ಸ್ವಸ್ತಿಕಾ ಶೆಟ್ಟಿಯವರುಗಳನ್ನು ಶಾಲು ಹೊದಿಸಿ ಅಭಿನಂದಿಸಿದರು.