ಪುತ್ತೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 9ರಂದು ಬಾಪೂ ಸಭಾಂಗಣ ಗಾಂಧಿಭವನ ಬೆಂಗಳೂರಿಲ್ಲಿ ಚೇತನ ಪೌಂಡೇಶನ್ ಕರ್ನಾಟಕ ಸೋಶಿಯಲ್ ಕ್ಲಬ್ ಆಶ್ರಯದಲ್ಲಿ ನಡೆಯುವ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಅವರ ಸಾಹಿತ್ಯ ಸಮಾಜ ಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಚೇತನ ಪೌಂಡೇಶನ್ ಕ್ಲಬ್ ನ ಅಧ್ಯಕ್ಷರು ಚಂದ್ರಶೇಖರ ಮಾಡಲಗೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.