ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಪ್ರತಿಭಟನೆಯ ಹತ್ತಿಕ್ಕುವ ಪ್ರಯತ್ನ – ರಿಯಾಝ್ ಬಳಕ್ಕ
ಪುತ್ತೂರು: ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಝಿಯವರ ಬಂಧನದ ವಿರುದ್ಧ ಎಸ್‌ಡಿಪಿಐ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ ಕುಂಬ್ರ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.
ಎಸ್‌ಡಿಪಿಐ ಕುಂಬ್ರ ಬ್ಲಾಕ್ ಅಧ್ಯಕ್ಷ ರಿಯಾಝ್ ಬಳಕ್ಕ ಮಾತನಾಡಿ,ದೇಶದಾದ್ಯಂತ ಕೇಂದ್ರ ಸರ್ಕಾರದ ಕರಾಳ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟನೆ ಭುಗಿಲೇಳುವ ಸಂದರ್ಭದಲ್ಲಿ ಆ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಸ್‌ಡಿಪಿಐಯ ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಝಿಯವರನ್ನು ಬಂಧಿಸುವ ಮೂಲಕ ಸರ್ಕಾರದ ವಿರುದ್ಧದ ಧ್ವನಿಗಳನ್ನು ಅಡಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಸರ್ಕಾರದ ವಿರುದ್ಧದ ಧ್ವನಿಗಳನ್ನು ಸುಳ್ಳಾರೋಪ ಹೊರಿಸಿ ಪ್ರಕರಣ ದಾಖಲಿಸಿ ಬಂಧಿಸಿದರೆ ಜನಸಾಮಾನ್ಯರು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ನೀವು ಭಾವಿಸಿದ್ದರೆ ಅದು ಮೂರ್ಖತನ ಎಂದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಕುಂಬ್ರ ಬ್ಲಾಕ್ ಉಪಾಧ್ಯಕ್ಷ ಅಶ್ರಫ್ ಕುರಿಯ, ಅಶ್ರಫ್ ಪರ್ಪುಂಜ, ಎಸ್ ಎಂ ಮಹಮ್ಮದ್ ಕುಂಞಿ ರವರು ಸಹಿತ ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು. ಆರ್ಯಾಪು ಗ್ರಾಮ ಸಮಿತಿ ಅಧ್ಯಕ್ಷರಾದ ಬಶೀರ್ ವಾಗ್ಲೆ ಸ್ವಾಗತಿಸಿ, ಕುಂಬ್ರ ಬ್ಲಾಕ್ ಕಾರ್ಯದರ್ಶಿ ಇರ್ಶಾದ್ ಜಾರತ್ತಾರ್ ವಂದಿಸಿದರು.