ಪುತ್ತೂರು: ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ದೇವಸ್ಥಾನಗಳ ಅಭಿವೃದ್ಧಿ ಮತ್ತು ದೇವಾಲಯ ಪ್ರವಾಸೋದ್ಯಮ ಕುರಿತು ಚರ್ಚೆ ನಡೆಯಿತು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ರವರು ಕರಾವಳಿ ದೇವಸ್ಥಾನಗಳ ಅಭಿವೃದ್ಧಿ ಬಗ್ಗೆ ಸದನದ ಗಮನ ಸೆಳೆದರು.
ಕೊಲ್ಲೂರು ಹಾಗೂ ಪುತ್ತೂರು ದೇವಸ್ಥಾನಗಳ ಅಭಿವೃದ್ಧಿ ಮತ್ತು ಕೇಂದ್ರದ ಪ್ರಸಾದ ಯೋಜನೆಗೆ ರಾಜ್ಯ ಸರ್ಕಾರದಿಂದ ಬಾಕಿ ಇರುವ ಕೆಲಸಗಳ ಬಗ್ಗೆ ಕೂಡ ಚರ್ಚಿಸಲಾಯಿತು.
ಈ ವಿಷಯದಲ್ಲಿ ಸ್ಥಳೀಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಸಚಿವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಿದರು.