ಪುತ್ತೂರು: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇದರ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಮಾ.6 ರಂದು ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ನಡೆಯಿತು.
ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಸವಿತ ಎಮ್ ವಿ ಕ್ರೀಡಾಕೂಟದ ಧ್ವಜಾರೋಹಣಗೈದು ಮಾತನಾಡಿ, “ದೈಹಿಕ ಸ್ಥಿರತೆ ಇದ್ದರ ಮಾತ್ರ ಮಾನಸಿಕವಾಗಿ ನೀವು ಸ್ಥಿರವಾಗಿರಲು ಸಾಧ್ಯ” ಮತ್ತು ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿದಂತಹ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಲ್ಲಿ ಮೀಸಲಾತಿ ಅವಕಾಶಗಳು ಇದೆಯೆಂದರು.
ಮುಖ್ಯ ಅತಿಥಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಈಶ್ವರ ಬೆಡೇಕರ್ ರವರು ಮಾತನಾಡಿ, ವಿದ್ಯಾರ್ಥಿನಿಯರಿಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವಂತೆ ಹಿತವಚನ ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಕೆ, ಐಕ್ಯೂಎಸಿ ಸಂಚಾಲಕರಾದ ಪ್ರೊ| ಸ್ವೀವನ್ ಕ್ವಾಡ್ರಸ್ , ಕ್ರೀಡಾ ವಿಭಾಗದ ಸಂಚಾಲಕರಾದ ಕಾಲೇಜು ಗ್ರಂಥಾಲಯ ವಿಭಾಗದ ಡಾ. ರವಿಚಂದ್ರ ನಾಯ್ಕ ಹಾಗೂ ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಟ್ಟಂಪಾಡಿ ಸ.ಪ್ರ.ದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪೊಡಿಯ, ಬಲ್ಮಠ ಸ.ಪ್ರ.ದ.ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಬ್ದುಲ್ ಕುಂಞ ಕೆ, ಕೊಂಬೆಟ್ಟು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೀರ್ತನ್, ಹಿರಿಯ ವಿದ್ಯಾರ್ಥಿನಿಯರು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.