ಕಡಬ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕಡಬ ತಾಲೂಕು ವತಿಯಿಂದ ಮಹಿಳಾ ದಿನಾಚರಣೆ, ಕಡಬ ತಾಲೂಕು ಸರಕಾರಿ ನೌಕರರಿಗೆ ಕ್ರೀಡಾ ಪಂದ್ಯಾಟ ಮತ್ತು ನೌಕರರ ಸಮಗ್ರ ಸಂಬಳ ಪ್ಯಾಕ್ ಜೋಡಣೆ ಕಾರ್ಯಕ್ರಮವು ಮಾ.9ರಂದು ಕಡಬ ಸರಕಾರಿ ಪೌಢ ಶಾಲಾ ಮೈದಾನದಲ್ಲಿ ನಡೆಯಲಿದೆ.
ಪೂರ್ವಾಹ್ನ ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಕು| ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಡಬ ಶಾಖೆಯ ಅಧ್ಯಕ್ಷ ವಿಮಲ್ ಕುಮಾರ್ ನೆಲ್ಯಾಡಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಕಡಬ ಪೋಲಿಸ್ ಇನ್ಸ್ ಪೆಕ್ಟರ್ ಅಭಿನಂದನ್, ವಲಯ ಅರಣ್ಯಾಧಿಕಾರಿ ವಿಮಲ್ ಬಾಬು, ವೈದ್ಯಾಧಿಕಾರಿ ಡಾ. ತ್ರಿಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿನಯ ಕುಮಾರಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ, ಶಿಶು ಅಭಿವೃದ್ದಿ ಅಧಿಕಾರಿ ಮಂಗಳಾ ಕಾಳೆ ಉಪಸ್ಥಿತರಿರಲಿದ್ದಾರೆ. ಗೌರವ ಅತಿಥಿಗಳಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯರಾದ ಪಿ.ಪಿ.ವರ್ಗೀಸ್, ಕೃಷ್ಣ ಶೆಟ್ಟಿ ಕಡಬ, ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸೈಯದ್ ಮೀರಾ ಸಾಹೇಬ್ ಅವರುಗಳು ಉಪಸ್ಥಿತರಿರಲಿದ್ದಾರೆ.
ಕ್ರಿಕೆಟ್ ಪಂದ್ಯಾಟ-ವಿವಿಧ ಆಟೋಟ ಸ್ಪರ್ಧೆ
ಕಡಬ ತಾಲೂಕು ಸರಕಾರಿ ನೌಕರರಿಗಾಗಿ ನಾಕ್ ಔಟ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಮಹಿಳಾ ದಿನಾಚರಣೆಯ ಅಂಗವಾಗಿ ಕಡಬ ತಾಲೂಕಿನ ಮಹಿಳಾ ನೌಕರರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಅಲ್ಲದೆ ಕೋಟಿ ವಿಮಾ ಸೌಲಭ್ಯದ ಸಮಗ್ರ ಸಂಬಳ ಪ್ಯಾಕ್ ತೆಗೆಯುವ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಜೋಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ವಿಮಲ್ ಕುಮಾರ್ ನೆಲ್ಯಾಡಿ , ಕಾರ್ಯದರ್ಶಿ ಗೋವಿಂದ ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.