ಪುತ್ತೂರು: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಘೋಷಣೆಯಾದ ಹಿನ್ನೆಯಲ್ಲಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಗೌರವಾರ್ಪಣಾ ಕಾಯಕ್ರಮ ಮಾ.8ರಂದು ಬೆಂಗಳೂರು ವಿಧಾನಸೌಧದಲ್ಲಿ ನಡೆಯಿತು.
ಬಜೆಟ್ ಮಂಡನೆ ಆದ ಬಳಿಕ ಶಾಸಕರು ವಿಧಾನ ಸೌಧದಿಂದ ಹೊರ ಬರುತ್ತಿದ್ದಂತೆ ಅವರನ್ನು ಶಾಲು ಹಾಕಿ, ಪುಷ್ಪಗುಚ್ಛ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂಧರ್ಭದಲ್ಲಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅದ್ಯಕ್ಷ ಎಂ. ಬಿ. ವಿಶ್ವನಾಥ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ ರಾಜಾರಾಮ್, ತಾಲೂಕು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಹಬೀಬ್ ಕಣ್ಣೂರು, ನಿಹಾಲ್ ಶೆಟ್ಟಿ, ಶರೀಫ್ ಕೊಯಿಲ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.