- ಏ.೮ – ಏ.೧೪ ವಾರ್ಷಿಕ ಜಾತ್ರಾ ಮಹೋತ್ಸವ
- ಏ.೧೨ ಬ್ರಹ್ಮ ರಥೋತ್ಸವ
ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.೮ರಿಂದ ಏ.೧೪ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯರವರು ವಿಧಿವಿಧಾನ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯ, ಸದಸ್ಯರಾದ ಸುಬ್ರಹ್ಮಣ್ಯ ಗೌಡ ಹಣಿಯೂರು, ಸುದೀರ್ ಪ್ರಸಾದ್ ಆನಾಜೆ, ಚಂದ್ರಶೇಖರ ನಾಯ್ಕ್ ಕುದುಮಾನ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಏ.೮ ರಿಂದ ಏ.೧೪ರ ವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಏ.೧೨ರಂದು ಬ್ರಹ್ಮ ರಥೋತ್ಸವ ನಡೆಯಲಿದೆ.