ಬಾಳ್ತಿಲ: ಬಾಳ್ತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ಎಚ್ ಡಿ ಎಫ್ ಸಿ ಬ್ಯಾಂಕಿನ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾರ್ಚ್ 8 ರಂದು ನಡೆಯಿತು.
ಎಚ್ ಡಿ ಎಫ್ ಸಿ ಬ್ಯಾಂಕಿನ ವತಿಯಿಂದ ದಾಸಕೋಡಿ ಅಂಗನವಾಡಿ ಸ್ತ್ರೀ ಶಕ್ತಿ ಮಹಿಳೆಯರಿಗೆ, ಪೋಷಕರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮತ್ತು ಅತ್ಯುತ್ತಮ ಸ್ತ್ರೀ ಶಕ್ತಿ ಸ್ವಸಹಾಯ ಗುಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ರಂಜಿನಿ, ಎಚ್ ಡಿ ಎಫ್ ಸಿ ಬ್ಯಾಂಕಿನ ರಿಲೇಶನ್ ಶಿಪ್ ಮ್ಯಾನೇಜರ್ ಕಿಶೋರ್ ಎಂ. ಎಸ್. ಹಾಗೂ ಬ್ಯಾಂಕಿನ ಸಿಬ್ಬಂದಿಗಗಳಾದ ಸಂಕೇತ್, ದೀಪ್ತಿ ಹಾಗೂ ಸ್ತ್ರೀ ಶಕ್ತಿ ಗುಂಪಿನ ಎಲ್ಲಾ ಸದಸ್ಯರು ಮತ್ತು ಅಂಗನವಾಡಿ ಕೇಂದ್ರದ ಪೋಷಕರು ಹಾಜರಿದ್ದರು.
ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಲಲಿತ ನಿರೂಪಿಸಿದರು. ಸ್ತ್ರೀ ಶಕ್ತಿ ಗುಂಪಿನ ಪ್ರತಿನಿಧಿ ಶ್ರೀಮತಿ ಪದ್ಮಿನಿ ಸ್ವಾಗತಿಸಿದರು. ಸ್ತ್ರೀ ಶಕ್ತಿ ಗುಂಪಿನ ಮಮತಾ ವಂದನಾರ್ಪಣೆ ಮಾಡಿದರು.