ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಕಟ್ಟಡದ ನೆಲಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ 5ನೇ ವರ್ಷದ ವಾರ್ಷಿಕ ಮಹಾಸಭೆಯು ಮಾ.10ರಂದು ಬೆಳಿಗ್ಗೆ ಗಂಟೆ 11ಕ್ಕೆ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ ಸಂಘದ ವತಿಯಿಂದ ದರ್ಬೆಯಿಂದ ಟೌನ್ ಬ್ಯಾಂಕ್ ತನಕ ಕಾಲ್ನಡಿಗೆ ಜಾಥ ನಡೆಯಲಿದ್ದು, ಬಳಿಕ ಮಹಾಸಭೆಯನ್ನು ಸಂಘದ ಗೌರವಾಧ್ಯಕ್ಷ ಬಿ.ಪುರಂದರ ಭಟ್ ಅವರು ಉದ್ಘಾಟಿಸಲಿದ್ದಾರೆ. ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ, ನರೆಂದ್ರ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪರೀಕ್ಷಿತ್ ತೋಳ್ಪಾಡಿ, ಸಂಘದ ಗೌರವ ಸಲಹೆಗಾರ ಸಂಜೀವ ನಾಯಕ್ ಕಲ್ಲೇಗ, ಅಸೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ನ ಅಧ್ಯಕ್ಷ ಸತ್ಯಗಣೇಶ್, ಕಾನೂನು ಸಲಹೆಗಾರ ದೇವಾನಂದ್ ಕೆ, ಸಲಹೆಗಾರ ಕೆ.ಜಯರಾಮ ಕುಲಾಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಪೂಜಾರಿ ಮುಕ್ವೆ ಅವರು ತಿಳಿಸಿದ್ದಾರೆ.