ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಪ್ಪಿನಂಗಡಿಯ ಸರಕಾರಿ ಆಸ್ಪತ್ರೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಅವರಿಗೆ ಹಣ್ಣು ಹಂಪಲು ನೀಡುವ ಮೂಲಕ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕೋಶಾಧಿಕಾರಿ ಫಹಿನ, ಉಪಾಧ್ಯಕ್ಷರಾದ ಝರೀನಾ, ಕಾರ್ಯದರ್ಶಿ ಸೌದ ಮಠ, ಜೊತೆ ಕಾರ್ಯದರ್ಶಿ ಫಾತಿಮಾ ನಿರ್ಮಾ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ನಫೀಸ ಮಠ, ನಬಿಸ ಸುಹೆಬ್, ಅಸ್ಮ, ಶಂಶೀನ ಹಾಗೂ ಆಸ್ಪತ್ರೆಗಳ ವೈದ್ಯರುಗಳು ಉಪಸ್ಥಿತರಿದ್ದರು.