ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ಮತ್ತು ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಲ ಕುದ್ಮಾರು ಇದರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯು ಬೆಳಂದೂರು ಕೆಲಂಬೀರಿ ರಾಜೀವಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಬೆಳಿಗ್ಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಳಂದೂರು ಗ್ರಾ.ಪಂ. ಲೆಕ್ಕ ಸಹಾಯಕಿ ಸುನಂದಾ ಅವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೌರಿ ಪ್ರಾರ್ಥಿಸಿದರು. ಪಂಚಾಯತ್ ಸಿಬ್ಬಂದಿಗಳು ತೀರ್ಪುಗಾರರಾಗಿ ಸಹಕರಿಸಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಕುದ್ಮಾರು ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಸಂಜೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾ.ಪಂ. ಅಧ್ಯಕ್ಷೆ ತೇಜಾಕ್ಷಿ ಕೊಡಂಗೆಯವರು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾದ ನ್ಯಾಯವಾದಿ ರಾಜೇಶ್ವರಿರವರು ಮಹಿಳೆಯರು ಸಮಸ್ಯೆಗಳನ್ನು ಯಾವ ರೀತಿ ಎದುರಿಸಬಹುದು ಮತ್ತು ಕಾನೂನು ರಕ್ಷಣೆಯ ಬಗ್ಗೆ ತಿಳಿಸಿದರು. ಬೆಳ್ಳಾರೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಪೂಜಾ ನಾಯಕ್ ಮಹಿಳೆಯರ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್ ಬಹುಮಾನ ವಿತರಿಸಿದರು. ಗ್ರಾ. ಪಂ. ಸದಸ್ಯರಾದ ಉಮೇಶ್ವರಿ ಅಗಳಿ, ವಿಠಲ ಗೌಡ ಅಗಳಿ, ಬೆಳ್ಳಾರೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಸುಭಾಷ್ ಉಪಸ್ಥಿತರಿದ್ದರು.
ದಯಾಮಣಿ ಪ್ರಾರ್ಥಿಸಿದರು. ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಲದ ಅಧ್ಯಕ್ಷೆ ಶುಭಾ ಆರ್ ನೋಂಡ ಅವರು ಸ್ವಾಗತಿಸಿ, ಉಮಾ ಗೌಡ ಪಳ್ಳತ್ತಾರು ವಿಜೇತರ ವಿವರ ವಾಚಿಸಿದರು ನಯನಾ ಕಾಪೆಜಾಲು ವಂದಿಸಿದರು. ಜ್ಞಾನೇಶ್ವರಿಯವರು ಕಾರ್ಯಕ್ರಮ ನಿರೂಪಿಸಿದರು.