ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಣಿ ಉಪನ್ಯಾಸ ಕಾರ್ಯಕ್ರಮ

0

ಉಪ್ಪಿನಂಗಡಿ: ನಾವು ನಡೆಯುವ ದಾರಿ ಎಷ್ಟೇ ಕಷ್ಟವಾಗಿದ್ದರೂ ನಾವು ತಲುಪುವ ಸ್ಥಳ ಸುಂದರವಾಗಿರಬೇಕು. ಆಸಕ್ತಿ ಇರುವ ವಿಷಯದಲ್ಲಿ ಹೆಚ್ಚು ಗುರಿ ಇಡಬೇಕು. ಸ್ಮರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಗುರಿಯನ್ನು ಈ ಹಂತದಲ್ಲೇ ವಿದ್ಯಾರ್ಥಿಗಳು ಇಟ್ಟುಕೊಂಡು ಅದಕ್ಕಾಗಿ ಈಗಿನಿಂದಲೇ ತಯಾರಿ ಆರಂಭಿಸಬೇಕು. ಅದರಲ್ಲಿ ತೇರ್ಗಡೆಯಾಗಿ ಉತ್ತಮ ಮಟ್ಟವನ್ನು ತಲುಪಬೇಕೆಂದು ಉಪ್ಪಿನಂಗಡಿ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸೀಮಾ ಕುಲಾಲ್ ಹೇಳಿದರು.


ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ಸರಣಿ ಉಪನ್ಯಾಸ ಕಾರ್ಯಕ್ರಮದ ನಾಲ್ಕನೇ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ” ಎಂಬ ವಿಷಯದ ಕುರಿತು ಅವರು ಮಾತನಾಡಿದರು.


ಮೊದಲಾಗಿ ವಿದ್ಯಾರ್ಥಿಗಳು ಇಂಗ್ಲೀಷ್ ಭಾಷೆಯನ್ನು ಚೆನ್ನಾಗಿ ಕಲಿತುಕೊಳ್ಳಬೇಕು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಪಟ್ಟ ಪುಸ್ತಕಗಳನ್ನು ಆರಿಸಿ ಅದನ್ನು ಅಧ್ಯಯನ ಮಾಡಿ, ಅಂತರ್ಜಾಲಗಳಲ್ಲಿ ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರೀಕ್ಷೆಗಳನ್ನು ಎದುರಿಸಿದಾಗ ಮಾತ್ರ ಐಎಎಸ್, ಐಪಿಎಸ್‌ನಂತಹ ಅಧಿಕಾರಿಗಳಾಗುವ ಗುರಿಯನ್ನು ಈಡೇರಿಸಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ರವಿರಾಜ್ ಎಸ್. ಈ ಸಂದರ್ಭ ಉಪಸ್ಥಿತರಿದ್ದರು. ಸ್ವಯಂಸೇವಕಿಯರಾದ ಸಂಗೀತಾ, ಪ್ರಿಯಲತಾ ಪ್ರಾರ್ಥಿಸಿದರು. ರಕ್ಷಾ ಸ್ವಾಗತಿಸಿದರು, ವಿಂದ್ಯಾ ವ್ಯಕ್ತಿ ಪರಿಚಯ ಮಾಡಿದರು. ದಿಶಾ ಎಂ.ಎಸ್. ವಂದಿಸಿದರು ಹಾಗೂ ತ್ರಿಶಾ ಕಾರ್ಯಕ್ರಮ ನಿರ್ವಹಿಸಿದರು.

ಪೋಟೋ: ಉಪನ್ಯಾಸ

LEAVE A REPLY

Please enter your comment!
Please enter your name here