ನೆಲ್ಯಾಡಿ: ಜೀರ್ಣೋದ್ದಾರಗೊಂಡ ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.5ರಿಂದ ಫೆ.10ರ ತನಕ ನಡೆದ ನವೀಕರಣ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಮಾ.9ರಂದು ಸಂಜೆ ದೇವಸ್ಥಾನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶಿವಾನಂದ ಕಾರಂತ ಕಾಂಚನ ಅವರು ಮಾತನಾಡಿ, ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವವು ಯಶಸ್ವಿಯಾಗಿ ನಡೆದಿದ್ದು ಹತ್ತೂರಿನಲ್ಲಿಯೂ ಹೆಸರುಗಳಿಸುವಂತೆ ಆಗಿದೆ. ಇದಕ್ಕೆಲ್ಲಾ ಊರಿನ, ಪರವೂರಿನ ಹಾಗೂ ವಿವಿಧ ಸಮಿತಿಯವರ ಶಕ್ತಿ ಮೀರಿದ ಪ್ರಯತ್ನ ಕಾರಣವಾಗಿದೆ. ಎಲ್ಲಾ ಸಮಿತಿಯವರು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವುದರಿಂದ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ ಎಂದರು. ಮುಂದೆ ಊರಿನ ಭಕ್ತರು 15 ಅಥವಾ ತಿಂಗಳಿಗೊಮ್ಮೆ ದೇವಸ್ಥಾನದಲ್ಲಿ ಸೇರುವಂತೆ ಆಗಬೇಕು. ಶಾಶ್ವತ ಪೂಜೆಯ ಸೇವೆ ಮಾಡಬೇಕು. ದೇವಸ್ಥಾನಕ್ಕೆ ನಿರಂತರ ಭಕ್ತರು ಬರುವಂತೆ ಆಗಬೇಕು. ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿಕೊಳ್ಳಬೇಕೆಂದು ಹೇಳಿದ ಅವರು ಬ್ರಹ್ಮಕಲಶೋತ್ಸವದ ಕೈಜೋಡಿಸಿದ ವಿವಿಧ ಸಮಿತಿ ಸಂಚಾಲಕರಿಗೆ, ಸದಸ್ಯರಿಗೆ, ಸಂಘಸಂಸ್ಥೆಯವರಿಗೆ ಕೃತಜ್ಞತೆ ಸಲ್ಲಿಸಿದರು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಮಾಧವ ಸರಳಾಯ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಸತೀಶ್ ಕೆ.ಎಸ್.ದುರ್ಗಾಶ್ರೀ, ಪ್ರಧಾನ ಕಾರ್ಯದರ್ಶಿ ಅಜಿತ್ಕುಮಾರ್ ಪಾಲೇರಿ ಅವರು ಸಂದರ್ಭೋಚಿತವಾಗಿ ಮಾತನಾಡಿ, ಅಭಿನಂದನೆ ಸಲ್ಲಿಸಿದರು. ಪ್ರಚಾರ ಸಮಿತಿ ಸಹ ಸಂಚಾಲಕ ಬಾಬು ಪೂಜಾರಿ ಕಿನ್ಯಡ್ಕ ನಿಸಿಕೆ ವ್ಯಕ್ತಪಡಿಸಿದರು.
ಲೆಕ್ಕಪತ್ರ ಮಂಡನೆ:
ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ರಮೇಶ್ ಭಟ್ ಬಿ.ಜಿ.ಅವರು ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನೆ ಮಾಡಿದರು. ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅಜಯ್ ಸರಳಾಯ ಅವರು ಜೀರ್ಣೋದ್ದಾರದ ಲೆಕ್ಕಪತ್ರ ಮಂಡನೆ ಮಾಡಿದರು.
ಶಾಂತಾ ಸರಳಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹೇಶ್ ಪಾತೃಮಾಡಿ ಸ್ವಾಗತಿಸಿ, ಜೀರ್ಣೋದ್ದಾರ ಸಮಿತಿ ಕೋಶಾಧಿಕಾರಿ ಅರುಣ್ ಸರಳಾಯ ವಂದಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಜೊತೆ ಕಾರ್ಯದರ್ಶಿ ಜನಾರ್ದನ ಗೌಡ ಬರೆಮೇಲು ನಿರೂಪಿಸಿದರು. ಬ್ರಹ್ಮಕಲಶೋತ್ಸವ, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿ ಸಂಚಾಲಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಮಾ.30: ದೃಢಕಲಶ
ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಊರ ಹಾಗೂ ಪರವೂರ ಭಕ್ತರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದಿದೆ. ಮಾ.30ರಂದು ದೃಢಕಲಶ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ವಿನಂತಿ.
-ಕೆ.ಶಿವಾನಂದ ಕಾರಂತ್ ಕಾಂಚನ
ಅಧ್ಯಕ್ಷರು, ಜೀರ್ಣೋದ್ದಾರ/ಬ್ರಹ್ಮಕಲಶೋತ್ಸವ ಸಮಿತಿ