ಪುತ್ತೂರು: ಬೆಳ್ಳಿಪ್ಪಾಡಿ ಕ್ರಾಸ್ ಬಳಿಯ ಗೂಡಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
2017ರ ಮಾ.2ರಂದು ಪುತ್ತೂರು ಪೊಲೀಸರು ತಪಾಸಣೆ ನಡೆಸುತ್ತಿದ್ದ ಸಂದರ್ಭ ಬೆಳ್ಳಿಪ್ಪಾಡಿ ಕ್ರಾಸ್ ಬಳಿಯ ಗೂಡಂಗಡಿಯಲ್ಲಿ ಮದ್ಯಮಾರಾಟ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಪ್ರಕರಣದ ಆರೋಪಿಯಾಗಿ ಗೂಡಂಗಡಿ ಮಾಲಕ ಉಗ್ಗಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಆಗಿನ ಎಸ್.ಐ.ಓಮನ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರ ವಕೀಲ ಕುಮಾರನಾಥ ಎಸ್ ವಾದಿಸಿದ್ದರು.